ಒಳಮೀಸಲಾತಿ: ವಾರದೊಳಗೆ ಮಧ್ಯಂತರ ವರದಿ ಬರಲಿದೆ- ಸಚಿವ ಜಿ. ಪರಮೇಶ್ವರ
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.