ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.